ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ! ಜೂನ್ 15ರಿಂದ 20 ವರೆಗೆ ಭಾರಿ ಮಳೆ ಮುನ್ಸೂಚನೆ, – ಈ ಜಿಲ್ಲೆಗಳ ಜನರು ಎಚ್ಚರ
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಶುರುವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಚಟುವಟಿಕೆಗೆ ಹೆಚ್ಚಾಗುವ ಸಾಧ್ಯತೆ ಇದೆ. ಎಂಬ ಮಾಹಿತಿ ವಿವಿಧ ಹವಾಮಾನ ವರದಿಗಳಿಂದ ತಿಳಿದು ಬಂದಿದೆ. 15 ರಿಂದ ಜೂನ್ 20ರವರೆಗೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಅನೇಕ ಭಾಗಗಳಲ್ಲಿ ಸಾಧಾರಣದಿಂದ ಬಾರಿ ಮಳೆ ಆಗುವ ನಿರೀಕ್ಷೆ ವ್ಯಕ್ತವಾಗಿದೆ. ಕಳೆದ ಕೆಲವು ವಾರಗಳಿಂದ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆ ಪ್ರಮಾಣದಲ್ಲಿ ಏರಿತ್ತ ಕಂಡುಬಂದಿದ್ದರೂ ಇದೀಗ ಮತ್ತೆ ಮಳೆ ಚುರುಕು ಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ ಅವಮಾನ ತಜ್ಞರ ಅಭಿಪ್ರಾಯದಂತೆ ಸ್ಥಳೀಯ ವಾತಾವರಣ ವ್ಯವಸ್ಥೆಗಳು ತೇವಾಂಶದ ಹೆಚ್ಚಳ ಹಾಗೂ ಮುಂಗಾರು ಮಳೆಗಳ ಚಟುವಟಿಕೆಗಳು ಪರಿಣಾಮದಿಂದ ರಾಜ್ಯದ ಹಲವೆಡೆ ಗುಡುಗು – ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕದ ಕರಾವಳಿ ಭಾಗಗಳು ಸಾಮಾನ್ಯವಾಗಿ ಮುಂಗಾರು ಅವಧಿಯಲ್ಲಿ ಅತಿ ಹೆಚ್ಚು ಮಳೆ ಆಗುವ ಪ್ರದೇಶಗಳಾಗಿವೆ. ಈ ವರ್ಷವೂ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಬಿಲ್ಲುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದಿಂದ ಹೆಚ್ಚಿನ ಪ್ರಮಾಣದಲ್ಲಿ ತೇವಾಂಶ ಹರಿದು ಬರುತ್ತಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಕೆಲವೆಡೆ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಈಗಾಗಲೇ ಕೆಲವು ಪ್ರದೇಶಗಳಲ್ಲಿ ಮಲೆ ಚಟುವಟಿಕೆ ಹೆಚ್ಚಾಗಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆಯಾಗುವ ಲಕ್ಷಣ ಕಂಡುಬರುತ್ತದೆ ಇದರಿಂದ ನದಿಗಳು, ಹಳ್ಳಗಳು ಹಾಗೂ ಜಲಾಶಯಗಳ ನೀರಿನ ಮಟ್ಟಗಳು ಏರಿಕೆ ಆಗುವ ಸಾಧ್ಯತೆ ಇದೆ. ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತವಾಗಿದೆ.
ಕರ್ನಾಟಕದಲ್ಲಿ ಯಾವ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ
ಮಲೆನಾಡು ಪ್ರದೇಶಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳು ಸಹ ಮುಂದಿನ ದಿನಗಳಲ್ಲಿ ಹೆಚ್ಚಿನ ಮಲೆ ಪ್ರಭಾವಕ್ಕೆ ಒಳಗಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಸಾಮಾನ್ಯ ವಾಗಿ ದಟ್ಟ ಮೋಡ ಕವಿದ ವಾತಾವರಣದೊಂದಿಗೆ ನಿರಂತರ ಮಳೆಯಾಗುತ್ತದೆ. ಮಲೆನಾಡಿನ ಕೆಲವು ಪ್ರದೇಶಗಳಲ್ಲಿ ಈಗಾಗಲೇ ಉತ್ತಮವಾಗಿದ್ದು ಮುಂದಿನ ಐದು ದಿನಗಳಲ್ಲಿ ಮಳೆ ಪ್ರಮಾಣ ಮತ್ತಷ್ಟು ಹೆಚ್ಚಾಗಬಹುದು ಎಂಬ ನಿರೀಕ್ಷೆ ಇದೆ. ಬೆಟ್ಟ ಗುಡ್ಡ ಪ್ರದೇಶಗಳಲ್ಲಿ ಭೂಕುಸಿತದಂತಹ ಘಟನೆಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಪ್ರವಾಸಿಗರರು ಸಹ ಹವಮಾನ ಪರಿಸ್ಥಿತಿಯನ್ನು ಗಮನಿಸಿ ಪ್ರಯಾಣ ಯೋಚನೆಗಳನ್ನು ರೂಪಿಸಬೇಕಾಗಿದೆ.
ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಮಲೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ತುಮಕೂರು, ರಾಮನಗರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಆಗುವ ಸಾಧ್ಯತೆ ಇದೆ. ನಗರ ಪ್ರದೇಶಗಳಲ್ಲಿ ಅಲ್ಪ ಅವಧಿಯಲ್ಲಿ ಹೆಚ್ಚು ಮಳೆಯಾದರೆ ರಸ್ತೆಗಳಲ್ಲಿ ನೀರು ನಿಲ್ಲುವ ಸಮಸ್ಯೆ ಉಂಟಾಗಬಹುದು. ಸಂಚಾರ ದಟ್ಟನೆ ಹಾಗೂ ವಾಹನ ಸವಾರರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹವಾಮಾನ ಮಾಹಿತಿಯನ್ನು ಗಮನಿಸುವುದು ಸೂಕ್ತವಾಗಿದೆ.
ಉತ್ತರ ಕರ್ನಾಟಕ ಕೆಲವು ಜಿಲ್ಲೆಗಳಲ್ಲಿ ಸಹ ಮಲೆಯಾಗುವ ಸಾಧ್ಯತೆಯಿದ್ದರೂ ಒಟ್ಟಾರೆ ಮಲೆಯ ಪ್ರಮಾಣ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಿಂತ ಕಡಿಮೆಯಾಗಬಹುದು ಎಂದು ಅಂದಾಜಿಸಲಾಗಿದೆ. ಬೆಳಗಾವಿ, ಧಾರವಾಡ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗದಗ ಹಾಗೂ ಕೊಪ್ಪಳ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆ ಇರಬಹುದು ಎಂಬ ಅಭಿಪ್ರಾಯವನ್ನು ಹವಾಮಾನ ತಜ್ಞರು ವ್ಯಕ್ತಪಡಿಸಿದ್ದಾರೆ. ಆದರದ ಮೇಲೆ ಕೆಳಗಡೆ ಉತ್ತಮ ಮಳೆಯು ದಾಖಲೆಯಾಗುವ ಸಾಧ್ಯತೆ.
ಈ ವರ್ಷದ ಮುಂಗಾರು ಅವಧಿಯಲ್ಲಿ ಎಲ್-ನಿನೋ ಪರಿಣಾಮದ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಎಲ್- ನೀನೋ ಎಂಬುದು ಪೆಸಿಫಿಕ್ ಸಾಗರದಲ್ಲಿ ಉಂಟಾಗುವ ಒಂದು ವಿಶೇಷ ಹವಾಮಾನ ಸ್ಥಿತಿಯಾಗಿತ್ತು. ಇದು ವಿಶ್ವದ ಅನೇಕ ಭಾಗಗಳ ಹವಾಮಾನ ವ್ಯವಸ್ಥೆಗಳ ಮೇಲೆ ಪರಿಣಾಮ ಬೀರುತ್ತದೆ. ಭಾರತದಲ್ಲಿಯೂ ಮುಂಗಾರು ಮಳೆ ಮೇಲೆ ಇದರ ಪರಿಣಾಮ ಕಂಡು ಬರುತ್ತದೆ, ಸಾಮಾನ್ಯವಾಗಿ ಎಲ್-ನೀನೋ ವರ್ಷಗಳಲ್ಲಿ ಮಳೆ ಪ್ರಮಾಣದಲ್ಲಿ ವ್ಯತ್ಯಾಸ ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಕೆಲವು ಪ್ರದೇಶಗಳಲ್ಲಿ ಕಡಿಮೆ ಮಳೆಯಾದರೆ ಇನ್ನು ಕೆಲವು ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗಬಹುದು ಹೀಗಾಗಿ ಮಳೆ ಹಂಚಿಗೆ ಸಮಾನವಾಗಿರುವುದಿಲ್ಲ.
ಕೃಷಿ ಕ್ಷೇತ್ರಕ್ಕೆ ಮಳೆ ಅತ್ಯಂತ ಪ್ರಮುಖ ಅಂಶವಾಗಿದೆ. ಕರ್ನಾಟಕದ ಲಕ್ಷಾಂತರ ರೈತರು ಮಳೆಯನ್ನೇ ಅವಲಂಬಿಸಿ ಕೃಷಿ ಚಟುವಟಿಕೆಗಳನ್ನು ನಡೆಸುತ್ತಾರೆ. ಹೀಗಾಗಿ ಮಳೆಯ ಪ್ರಮಾಣದಲ್ಲಿ ಏರಿಳಿತ ಉಂಟಾದರೆ ಅದರ ನೇರ ಪರಿಣಾಮ ಕೃಷಿ ಉತ್ಪಾದನೆಯ ಮೇಲೂ ಬೀರುತ್ತದೆ. ಈ ಹಿನ್ನೆಲೆಯಲ್ಲಿ ರೈತರು ಹವಾಮಾನ ಮುನ್ಸೂಚನೆಗಳು ಗಮನಿಸಿ ತಮ್ಮ ಕೃಷಿ ಚಟುವಟಿಕೆಗಳನ್ನು ಸೂಚಿಸುವುದು ಅಗತ್ಯವಾಗಿದೆ. ಮಳೆ ನೀರು ಸಂಗ್ರಹಣೆ ಸೂಕ್ತ ಬೆಳೆ ಆಯ್ಕೆ ಹಾಗೂ ನೀರಿನ ಸಮರ್ಪಕ ಬಳಕೆ ಮುಂತಾದ ಕ್ರಮಗಳು ಭವಿಷ್ಯದಲ್ಲಿ ಉತ್ತಮ ಫಲಿತಾಂಶ ನೀಡಬಹುದು.
ಮುನ್ನೆಚ್ಚರಿಕೆ ಕ್ರಮಗಳು
ಕಳೆದ ಕೆಲವು ವರ್ಷಗಳಿಂದ ಹವಮಾನ ಬದಲಾವಣೆ ಪರಿಣಾಮ ವಿಶ್ವದಾದ್ಯಂತ ಸ್ಪಷ್ಟವಾಗಿ ಗೋಚರಿಸುತ್ತಿದೆ. ಕರ್ನಾಟಕದಲ್ಲಿಯೂ ಮಳೆಯ ಮಾದರಿಯಲ್ಲಿ ಸಾಕಷ್ಟು ಬದಲಾವಣೆಗಳು ಕಂಡು ಬರುತ್ತಿದೆ. ಹಿಂದೆ ನಿರ್ದಿಷ್ಟ ಅವಧಿಯಲ್ಲಿ ಸಾಮಾನವಾಗಿ ಹಂಚಿಕೆಯಾಗಿ ಸುರಿಯುತ್ತಿದ್ದ ಮಳೆ ಈಗ ಕೆಲವೇ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸುರಿಯುತ್ತಿರುವುದು ಕಂಡು ಬರುತ್ತಿದೆ. ಇದರ ಪರಿಣಾಮವಾಗಿ ಪ್ರವಾಹ, ಭೂಕುಸಿತ ಹಾಗೂ ಬೆಳೆ ಹಾನಿಯಂತಹ ಸಮಸ್ಯೆಗಳು ಹೆಚ್ಚಾಗುತ್ತಿದೆ. ಹವಾಮಾನ ತಜ್ಞರ ಪ್ರಕಾರ ಮುಂದಿನ ವರ್ಷಗಳಲ್ಲಿ ಈ ಪ್ರವೃತ್ತಿ ಮುಂದುವರೆಯುವ ಸಾಧ್ಯತೆ ಇದೆ.
ಸಾರ್ವಜನಿಕರು ಮಳೆಯ ಸಮಯದಲ್ಲಿ ಕೆಲವು ಮುನ್ನಚ್ಚರಿಕೆ ಕ್ರಮಗಳು ಪಾಲಿಸುವುದು ಅಗತ್ಯವಾಗಿದೆ. ಗುಡುಗು ಮಿಂಚಿನ ಸಮಯದಲ್ಲಿ ತೆರೆದ ಪ್ರದೇಶಗಳಲ್ಲಿ ನಿಲ್ಲಬಾರದು, ಮರಗಳ ಕೆಳಗೆ ಆಶ್ರಯ ಪಡೆಯುವುದನ್ನು ತಪ್ಪಿಸಿಕೊಳ್ಳಬೇಕು. ಬಾರಿ ಮಳೆ ಸಂದರ್ಭದಲ್ಲಿ ನೀರು ತುಂಬಿದ ರಸ್ತೆಗಳಲ್ಲಿ ವಾಹನ ಚಾಲನೆ ಮಾಡುವಾಗ ಹೆಚ್ಚಿನ ಎಚ್ಚರಿಕೆ ವಹಿಸಬೇಕು. ವಿದ್ಯುತ್ ತಂತಿಗಳು ಅಥವಾ ಕಂಬದ ಸಮೀಪ ಹೋಗುವುದನ್ನು ತಪ್ಪಿಸಬೇಕು. ಹವಾಮಾನ ಇಲಾಖೆ ಅಧಿಕೃತ ಮಾಹಿತಿಯನ್ನು ನಿಯಮಿತವಾಗಿ ಪರಿಶೀಲಿಸುವುದು ಉತ್ತಮ.
ನಗರ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾದ ಚರಂಡಿ ವ್ಯವಸ್ಥೆ ಮೇಲೂ ಒತ್ತಡ ಹೆಚ್ಚಾಗುತ್ತದೆ. ಕೆಲವು ಕಡೆ ನೀವು ಸರಿಯಾಗಿ ಹರಿದು ಹೋಗದ ಕಾರಣ ರಸ್ತೆಗಳಲ್ಲಿ ನೀರು ನಿಲ್ಲುತ್ತದೆ. ಇದರಿಂದ ವಾಹನ ಸಂಚಾರಕ್ಕೆ ತೊಂದರೆ ಉಂಟಾಗುತ್ತದೆ. ಬೆಂಗಳೂರು ಸೇರಿದಂತೆ ದೊಡ್ಡ ನಗರಗಳಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ. ಹೀಗಾಗಿ ನಗರ ಆಡಳಿತಗಳು ಮುಂಗಾರು ಆರಂಭಕ್ಕೂ ಮುನ್ನ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ.
ಅಂತಿಮ ಮಾತು
ಜೂನ್ 15ರಿಂದ 20ರವರೆಗೆ ರಾಜ್ಯದ ಹಲವು ಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ರೈತರು, ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಸಾರ್ವಜನಿಕರು ತಮ್ಮ ದಿನನಿತ್ಯ ಚಟುವಟಿಕೆಗಳನ್ನು ಹವಾಮಾನ ಪರಿಸ್ಥಿತಿಗೆ ಅನುಗುಣವಾಗಿ ಯೋಚಿಸಿಕೊಳ್ಳುವುದು ಉತ್ತಮ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ವಾಸಿಸುವ ಸ್ಥಳೀಯ ಆಡಳಿತ ಸೂಚನೆಗಳನ್ನು ಪಾಲಿಸಬೇಕು. ಅಗತ್ಯವಿದ್ದರೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸಿದ್ಧವಾಗಿರಬೇಕು.
ಒಟ್ಟಾರೆ ನೋಡಿದರೆ ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಗಳು ನಿರೀಕ್ಷೆ ಇದ್ದರೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಉತ್ತಮ ಮಳೆ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಬಹುದು. ಎಲ್ – ನಿನೋ ಪರಿಣಾಮ ಹಾಗೂ ಸ್ಥಳೀಯ ಹವಮಾನ ವ್ಯವಸ್ಥೆಗಳ ಹಿನ್ನೆಲೆಯಲ್ಲಿ ಮಳೆ ಹಂಚಿಕೆಯಲ್ಲಿ ವ್ಯತ್ಯಾಸ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮತ್ತು ರೈತರು ಎಚ್ಚರಿಕೆಯಿಂದ ಇರಬೇಕು. ಹವಾಮಾನ ಇಲಾಖೆಯ ಅಧಿಕೃತ ಮಾಹಿತಿ ಹಾಗೂ ಸ್ಥಳೀಯ ಆಡಳಿತ ಸೂಚನೆಗಳು ಅನುಸರಿಸುವುದರ ಮೂಲಕ ಯಾವುದೇ ಅನಾಹುತಗಳನ್ನು ತಪ್ಪಿಸಬಹುದು. ಮುಂದಿನ ದಿನಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಎಲ್ಲರೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅತ್ಯಂತ ಮುಖ್ಯವಾಗಿದೆ.