KSP Recruitment 2026: ಕರ್ನಾಟಕದಲ್ಲಿ 1600 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ- PUC ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ
ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ ಮಿತ್ರರಿಗೆ ಸುವರ್ಣ ಅವಕಾಶ
ಕರ್ನಾಟಕದಲ್ಲಿ ಸರಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಸಾವಿರಾರು ಯುವ ಖರೀದಿಗೆ ಬಹು ನಿರೀಕ್ಷಿತ ಅವಕಾಶ ದೊರೆತಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರವು 1600 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (CAR/DAR) ಹುದ್ದೆಗಳೆ ಮತಿ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಈ ನೇಮಕಾತಿಯು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ ನಡೆಯಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸರ್ಕಾರಿ ಉದ್ಯೋಗ ಭದ್ರತೆ, ಆಕರ್ಷಕ ವೇತನ, ವಿವಿಧ ಭತ್ಯೆಗಳು ಹಾಗೂ ಸಮಾಜ ಸೇವೆಯ ಅವಕಾಶಗಳನ್ನು ಒದಗಿಸುವ ಈ ಹುದ್ದೆಗಳು ಯುವಕರಿಗೆ ಹೆಚ್ಚಿನ ಆಸಕ್ತಿ ಮೂಡಿಸಿದೆ. ವಿಶೇಷವಾಗಿ ಪಿಯುಸಿ ಅಥವಾ 12ನೇ ತರಗತಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಉದ್ಯೋಗ ಜೊತೆಗೆ ಗೌರವಯುತ ಜೀವನವನ್ನು ನಿರ್ಮಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ನೇಮಕಾತಿ ಸಂಪೂರ್ಣ ವಿವರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ನಡೆಯುತ್ತಿರುವ ಈ ನೇಮಕಾತಿ ಅಡಿಯಲ್ಲಿ ಒಟ್ಟು 1600 ಶಾಸಸ್ಥರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ರಾಜ್ಯದ ವಿವಿಧ ಸ್ವಾತಸ್ತ್ರ ಮೀಸಲು ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ನೇಮಕಾತಿ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿದ್ದು, ಲಿಖಿತ ಪರೀಕ್ಷೆ ಹಾಗೂ ದೈಹಿಕ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ರಾಜ್ಯದ ವಿವಿಧ ಪೊಲೀಸ್ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸಲಾವಕಾಶ ಪಡೆಯಲಿದ್ದು, ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಮಹತ್ವದ ಜವಾಬ್ದಾರಿಯನ್ನು ಹೊರುವ ಅವಕಾಶ ದೊರೆಯಲಿದೆ.
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಮಹತ್ವ
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳು ಪೊಲೀಸ್ ಇಲಾಖೆಯ ಪ್ರಮುಖ ಹುದ್ದೆಗಳಾಗಿವೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಶೇಷ ಸಂದರ್ಭಗಳಲ್ಲಿ ಭದ್ರತೆ ಒದಗಿಸುವಲ್ಲಿ ಹಾಗೂ ಸಾರ್ವಜನಿಕ ಶಾಂತಿಯ ಪಾತ್ರ ಅತ್ಯಂತ ಮಹತ್ವದಾಗಿದೆ. ವಿವಿಧ ಸರ್ಕಾರಿ ಕಾರ್ಯಕ್ರಮಗಳು, ಚುನಾವಣೆಗಳು, ಉತ್ಸವಗಳು ಹಾಗೂ ತುರ್ತು ಪರಿಸ್ಥಿತಿಗಳ ಸಂದರ್ಭದಲ್ಲಿ ಸಶಸ್ತ್ರ ಪೊಲೀಸ್ ಸಿಬ್ಬಂದಿ ಸೇವೆ ಅಗತ್ಯವಾಗಿರುತ್ತದೆ.
ಈ ಹುದ್ದೆಗೆ ಆಯ್ಕೆ ಆಗುವ ಅಭ್ಯರ್ಥಿಗಳು ಕೇವಲ ಉದ್ಯೋಗವನ್ನೇ ಪಡೆಯುವುದಿಲ್ಲ. ಸಮಾಜಸೇವೆ, ಸಾರ್ವಜನಿಕ ರಕ್ಷಣೆ, ಹಾಗೂ ರಾಷ್ಟ್ರಸೇವೆ ಅಂತಹ ಗೌರವಯುತ ಜವಾಬ್ದಾರಿಯನ್ನು ಕೂಡ ವಹಿಸಿಕೊಳ್ಳುತ್ತಾರೆ. ಇದೇ ಕಾರಣದಿಂದ ಪ್ರತಿ ವರ್ಷ ಸಾವಿರಾರು ಅಭ್ಯರ್ಥಿಗಳು ಪೊಲೀಸ್ ಇಲಾಖೆ ನೇಮಕಾತಿಯಲ್ಲಿ ಭಾಗವಹಿಸುತ್ತಿದ್ದಾರೆ.
ಹುದ್ದೆಗಳ ವಿಭಾಗವಾರು ಹಂಚಿಕೆ
ನೇಮಕಾತಿಯಲ್ಲಿ ಎರಡು ವಿಭಾಗಗಳ ಅಡಿಯಲ್ಲಿ ಹುದ್ದೆಗಳ ಹಂಚಿಕೆ ಮಾಡಲಾಗಿದೆ. Armed Police Constable (CAR/DAR – RPC) ಭಾಗದಲ್ಲಿ ಹೆಚ್ಚಿನ ಹುದ್ದೆಗಳಿದ್ದು, Armed Police Constable (CAR/DAR – KK) ಭಾಗದಲ್ಲಿ ಪ್ರತ್ಯೇಕ ಹುದ್ದೆಗಳನ್ನು ಮೀಸಲಿಡಲಾಗಿದೆ. ಹುಟ್ಟು ಸಾವಿರ 600 ಹುದ್ದೆಗಳ ಭರ್ತಿ ಮೂಲಕ ರಾಜ್ಯ ಪೊಲೀಸ್ ಇಲಾಖೆ ಸಿಬ್ಬಂದಿ ಕೊರತೆಯನ್ನು ನಿವಾರಿಸುವ ಉದ್ದೇಶ ಸರಕಾರ ಹೊಂದಿದೆ.
ನೇಮಕಾತಿಯ ರಾಜ್ಯದ ವಿವಿಧ ಜಿಲ್ಲೆಗಳ ಅಭ್ಯರ್ಥಿಗಳಿಗೆ ಸಮಾನ ಅವಕಾಶ ಒದಗಿಸುವ ಮೂಲಕ ಉದ್ಯೋಗ ಅವಕಾಶಗಳನ್ನು ಹೆಚ್ಚಿಸುವ ಮಹತ್ವದ ಹೆಜ್ಜೆಯಾಗಿದೆ.
ವಿದ್ಯಾರ್ಹತೆ ಮತ್ತು ಅರ್ಹತಾ ಮಾನದಂಡಗಳು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪಿಯುಸಿ ಅಥವಾ 12ನೇ ತರಗತಿ ಉತ್ತೀರ್ಣರಾಗಿರಬೇಕು. ಯಾವುದೇ ವಿಷಯದಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವಿಜ್ಞಾನ, ವಾಣಿಜ್ಯ ಅಥವಾ ಕಲಾವಿಭಾಗದಲ್ಲಿ ಪಿಯುಸಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಅರ್ಹತೆ ಇರುತ್ತದೆ.
ಹೆಚ್ಚಿನ ವಿದ್ಯಾರ್ಥಿ ಹೊಂದಿರುವ ಪದವೀಧರರು ಹಾಗೂ ಸ್ನಾತಕೋತ್ತರ ಪದವಿದಾರರು ಸಹ ಅರ್ಜಿ ಸಲ್ಲಿಸಲು ಅವಕಾಶ ಹೊಂದಿದ್ದಾರೆ. ಆದರೆ ಕನಿಷ್ಠ ವಿದ್ಯಾರ್ಹತೆ PUC ಆಗಿರುವುದರಿಂದ ಗ್ರಾಮೀಣ ಪ್ರದೇಶದ ಯುವಕರಿಗೂ ಈ ನೇಮಕಾತಿಯಲ್ಲಿ ಭಾಗವಹಿಸಲು ಉತ್ತಮ ಅವಕಾಶ ದೊರೆಯುತ್ತದೆ.
ವಯೋಮಿತಿ ಮತ್ತು ಸಡಿಲಿಕೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹೊಂದಿರಬೇಕು. ಗರಿಷ್ಠ ವಯೋಮಿತಿ 33 ವರ್ಷವಾಗಿದ್ದು, ಸರ್ಕಾರದ ನಿಯಮಾವಳಿಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಹಿಂದುಳಿದ ವರ್ಗಗಳಾದ 2A, 2B, 3A ಹಾಗೂ 3B ಅಭ್ಯರ್ಥಿಗಳಿಗೆ 2 ವರ್ಷಗಳ ವಯೋಮಿತಿ ಸಡಿಲಿಕೆ ಲಭ್ಯವಿರುತ್ತದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ದೊರೆಯುತ್ತದೆ. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷದವರೆಗೆ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ.
ಈ ಸಡಿಲಿಕೆಗಳಿಂದ ಹೆಚ್ಚಿನ ಸಂಖ್ಯೆಗಳ ಅಭ್ಯರ್ಥಿಗಳಿಗೆ ಸರಕಾರಿ ಉದ್ಯೋಗ ಪಡೆಯುವ ಅವಕಾಶ ದೊರೆಯುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 22 ಜೂನ್ 2026
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 22 ಜುಲೈ 2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 24 ಜುಲೈ 2026
ಲಿಖಿತ ಪರೀಕ್ಷೆ ದಿನಾಂಕ : 6 ಸೆಪ್ಟೆಂಬರ್ 2026
ಅರ್ಜಿ ಶುಲ್ಕ
ಸಾಮಾನ್ಯ ವರ್ಗ /OBC/ 2A/2B/3A/3B ಅಭ್ಯರ್ಥಿಗಳು ಅರ್ಜಿ ಶುಲ್ಕ : ₹750
SC/ST ಅಭ್ಯರ್ಥಿಗಳು ಅರ್ಜಿ ಶುಲ್ಕ : ₹500
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ( ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ನೆ, ನೆಟ್ ಬ್ಯಾಂಕಿಂಗ್, ಅಥವಾ UPI) ಪಾವತಿಸಬಹುದು .
ಆಕರ್ಷಕ ವೇತನ ಮತ್ತು ಸೌಲಭ್ಯಗಳು
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕ ಸರಕಾರದ ವೇತನ ಶ್ರೇಣಿಯ ಪ್ರಕಾರ ತಿಂಗಳಿಗೆ ₹37,500 ರಿಂದ ₹ 76,100 ವರೆಗೆ ವೇತನ ನೀಡಲಾಗುತ್ತದೆ. ಇದು ಆರಂಬಿಕಾಂತದಲ್ಲಿ ಉತ್ತಮ ವೇತನವಾಗಿದ್ದು ಭವಿಷ್ಯದಲ್ಲಿ ವೇತನ ಹೆಚ್ಚಳದ ಅವಕಾಶಗಳು ಲಭ್ಯವಿರುತ್ತದೆ.
ವೇತನದ ಜೊತೆಗೆ ಮನೆ ಬಾಡಿಗೆ ಭತ್ಯೆ, ವೈದ್ಯಕೀಯ ಸೌಲಭ್ಯ, ಪ್ರಯಾಣ ಭತ್ಯೆ, ನಿವೃತ್ತಿವೇತನ ವಿಮಾ ಸೌಲಭ್ಯ, ದೊರೆಯುತ್ತದೆ. ಸರ್ಕಾರಿ ಉದ್ಯೋಗದ ಭದ್ರತೆ ಹಾಗೂ ಆರ್ಥಿಕ ಸ್ಥಿರತೆ ಈ ಹುದ್ದೆಗಳ ಪ್ರಮುಖ ಆಕರ್ಷಣೆಯಾಗಿದೆ.
ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ
ಅಭ್ಯರ್ಥಿಗಳ ಆಯ್ಕೆ ಹಲವು ಹಂತಗಳಲ್ಲಿ ನಡೆಯಲಿದೆ. ಮೊದಲ ಲಿಖಿತ ಪರೀಕ್ಷೆ ನಡೆಯಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಸಹಿಷ್ಣತೆ ಪರೀಕ್ಷೆ ಹಾಗೂ ದೈಹಿಕ ಮಾನದಂಡ ಪರೀಕ್ಷೆಗೆ ಹಾಜರಬೇಕಾಗುತ್ತದೆ.
ದೈಹಿಕ ಪರೀಕ್ಷೆಯಲ್ಲಿ ಯಶಸ್ಸಿಯಾದ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ. ಎಲ್ಲಾ ಹಂತಗಳಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಅಂತಿಮ ಆಯ್ಕೆ ಪಟ್ಟಿಯಲ್ಲಿ ಸೇರಿಸಲಾಗುತ್ತದೆ. ಈ ಸಂಪೂರ್ಣ ಪ್ರಕ್ರಿಯೆಯು ಅಭ್ಯರ್ಥಿಗಳ ಜ್ಞಾನ, ದೈಹಿಕ ಸಾಮರ್ಥ್ಯ ಹಾಗೂ ಸೇವಾ ಯೋಗ್ಯತೆಯನ್ನು ಮೌಲ್ಯಮಾಪನ ಮಾಡುವ ಉದ್ದೇಶ ಹೊಂದಿದೆ.
ಲಿಖಿತ ಪರೀಕ್ಷೆಯ ಮಾದರಿ
ಲಿಖಿತ ಪರೀಕ್ಷೆಯು OMR ಆಧಾರಿತವಾಗಿರುತ್ತದೆ. ಒಟ್ಟು 100 ಪ್ರಶ್ನೆಗೆ 100 ಅಂಕಗಳು ನಿಗದಿಪಡಿಸಲಾಗಿದೆ. ಪರೀಕ್ಷೆ ಅವಧಿ ಇತ್ತು 90 ನಿಮಿಷವಾಗಿರುತ್ತದೆ. ಬಹು ಆಯ್ಕೆ ಪ್ರಶ್ನೆಗಳ ಮೂಲಕ ಅಭ್ಯರ್ಥಿಗಳ ಸಾಮಾನ್ಯ ಜ್ಞಾನ ಹಾಗೂ ಮಾನಸಿಕ ಸಾಮರ್ಥ್ಯಗಳನ್ನು ಪರೀಕ್ಷಿಸಲಾಗುತ್ತದೆ.
ಸಾಮಾನ್ಯ ಜ್ಞಾನ, ಇತಿಹಾಸ, ಭೂಗೋಳ ಶಾಸ್ತ್ರ, ವಿಜ್ಞಾನ, ಭಾರತೀಯ ಸಂವಿಧಾನ, ರಾಷ್ಟ್ರೀಯ ಸ್ವಾತಂತ್ರ್ಯ ಚಳುವಳಿ, ಸಾಮಾನ್ಯ ಅಧ್ಯಯನ, ಮಾನಸಿಕ ಸಾಮರ್ಥ್ಯ ಹಾಗೂ ನೈತಿಕ ಶಿಕ್ಷಣಗಳಿಂದ ಪ್ರಶ್ನೆಗಳು ಕೇಳಲಾಗುತ್ತದೆ. ತಪ್ಪು ಉತ್ತರಗಳಿಗೆ 0.25 ಅಂಕಗಳ ನೆಗೆಟಿವ್ ಮಾರ್ಕೆಟಿಂಗ್ ಇರುವುದರಿಂದ ಅಭ್ಯರ್ಥಿಗಳು ಎಚ್ಚರಿಕೆಯಿಂದ ಉತ್ತರಿಸಬೇಕಾಗುತ್ತದೆ.
ಅಗತ್ಯ ದಾಖಲೆಗಳು
- ಆಧಾರ್ ಕಾರ್ಡ್
- SSLC ಅಂಕಪಟ್ಟಿ
- ಪಿಯುಸಿ ಅಥವಾ 12ನೇ ತರಗತಿ ಅಂಕಪಟ್ಟಿ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಪಾಸ್ ಪೋರ್ಟ್ ಗಾತ್ರದ ಭಾವಚಿತ್ರ
- ಅಭ್ಯರ್ಥಿಯ ಸಹಿ
- ಮೊಬೈಲ್ ಸಂಖ್ಯೆ
- ಇಮೇಲ್ ಐಡಿ
- ಅಂಗವಿಕಲರ ಪ್ರಮಾಣ ಪತ್ರ ( ಅನ್ವಯಿಸಿದರೆ )
- ಇತರೆ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
- ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
- ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ
- New Registration ಮೇಲೆ ಕ್ಲಿಕ್ ಮಾಡಿ ನೋಂದಣಿ ಮಾಡಿಕೊಳ್ಳಿ
- ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ ಬಳಸಿಕೊಳ್ಳುವುದು
- ಅರ್ಜಿ ನಮೂನೆಯಲ್ಲಿ ವೈಯಕ್ತಿಕ ಮಾಹಿತಿಯನ್ನು ಭರ್ತಿ ಮಾಡಿ
- ವಿದ್ಯಾರ್ಹತೆ ವಿವರಗಳು ನಮೂದಿಸಿ
- ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ
- ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕ ಪಾವತಿಸಿ
- ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ
- ಅರ್ಜಿ ಸಲ್ಲಿಸಿದ ನಂತರ ಅದರ ಪ್ರಿಂಟ್ ಪ್ರತಿಗಳನ್ನು ಸುರಕ್ಷಿತವಾಗಿ ಉಳಿಸಿಕೊಳ್ಳಿ
ಕೊನೆಯ ಮಾತು
ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಯುವಕರಿಗೆ 1600 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯು ಅತ್ಯುತ್ತಮ ಅವಕಾಶವಾಗಿದೆ. ಪಿಯುಸಿ ಪಾಸ್ ಅಭ್ಯರ್ಥಿಗಳಿಂದ ಹಿಡಿದು ಪದವೀದಾರರವರೆಗೆ ಎಲ್ಲಾ ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಉತ್ತಮವೇತನ, ಸ್ಥಿರ ಉದ್ಯೋಗ, ಸರಕಾರಿ ಸೌಲಭ್ಯಗಳು ಹಾಗೂ ಸಮಾಜಸೇವೆಯ ಅವಕಾಶಗಳನ್ನು ಒದಗಿಸುವ ಹುದ್ದೆಗಳು ಯುವಕರ ಭವಿಷ್ಯವನ್ನು ಉಜ್ವಲಗೊಳಿಸಬಲ್ಲವು.
ಆಸಕ್ತ ಅಭ್ಯರ್ಥಿಗಳು ಕೊನೆ ದಿನಾಂಕದವರೆಗೆ ಕಾಯದೆ ಆದಷ್ಟು ಬೇಗ ಅರ್ಜಿ ಸಲ್ಲಿಸಿ, ಪರೀಕ್ಷಾ ಸಿದ್ಧತೆಯನ್ನು ಆರಂಭಿಸಬೇಕು. ಪರಿಶ್ರಮ ಯೋಜಿತ ಅಧ್ಯಯನ ಹಾಗೂ ದೈಹಿಕ ಸಿದ್ಧತೆಗಳ ಮೂಲಕ ಈ ನೇಮಕಾತಿಯಲ್ಲಿ ಯಶಸ್ಸು ಸಾಧಿಸಿ ಕರ್ನಾಟಕ ಪೊಲೀಸ್ ಇಲಾಖೆಯ ಭಾಗವಾಗುವ ಕನಸು ನನಸಾಗಿಸಿಕೊಳ್ಳಬಹುದು.
Application link 🔗🔗 : https://cetonline.karnataka.gov.in/kea/apckk