ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್..! KSRTC ಬಸ್ ಗೆ ಆನ್ಲೈನ್ ಅರ್ಜಿ ಆರಂಭ – ಮನೆಯಲ್ಲಿ ಕುಳಿತು ಅರ್ಜಿ ಹಾಕಿ
ಪರಿಚಯ
ಕರ್ನಾಟಕ ವಿದ್ಯಾರ್ಥಿಗಳಿಗೆ ಇದೀಗ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. 2026 ನೇ ಸಾಲಿನ KSRTC ವಿದ್ಯಾರ್ಥಿ ಬಸ್ ಪಾಸ್ ಅರ್ಜಿ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದ್ದು ವಿದ್ಯಾರ್ಥಿಗಳು ಈಗ ಯಾವುದೇ ಸೈಬರ್ ಸೆಂಟರ್ ಗೆ ಹೋಗದೆ ಮನೆಯಲ್ಲಿ ಕುಳಿತು Seva Sindhu Portal ಮೂಲಕ ಸುಲಭವಾಗಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಪ್ರತಿದಿನ ಶಾಲೆ, ಕಾಲೇಜು, ತಾಂತ್ರಿಕ ಶಿಕ್ಷಣ ಸಂಸ್ಥೆಗಳು ಹಾಗೂ ವೃತ್ತಿಪರ ಕೋರ್ಸ್ ಗಳಿಗೆ ಪ್ರಯಾಣ ಮಾಡುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಈ ಯೋಜನೆ ತುಂಬಾ ಉಪಯುಕ್ತವಾಗಿದೆ.
ರಾಜ್ಯ ಸರ್ಕಾರ ಮತ್ತು KSRTC ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ಉದ್ದೇಶದಿಂದ ಪ್ರತಿ ವರ್ಷ ಈ ಬಸ್ ಪಾಸ್ ಯೋಜನೆಯನ್ನು ಜಾರಿಗೆ ತರುತ್ತಿದೆ. ವಿಶೇಷವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಈ ಯೋಜನೆ ದೊಡ್ಡ ಸಹಾಯವಾಗಿದ್ದು ಕಡಿಮೆ ವೆಚ್ಚದಲ್ಲಿ ಸುರಕ್ಷಿತ ಮತ್ತು ಸುಲಭ ಪ್ರಯಾಣ ಸೌಲಭ್ಯ ಒದಗಿಸುತ್ತದೆ.
ಇತ್ತೀಚಿನ ದಿನಗಳಲ್ಲಿ ಶಿಕ್ಷಣ ವೆಚ್ಚ ಹೆಚ್ಚುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸಂಚಾರ ವೆಚ್ಚ ಕಡಿಮೆ ಮಾಡಲು ಸರ್ಕಾರ ಈ ಯೋಜನೆಯನ್ನು ಮುಂದುವರೆಸಿದೆ. ಶಾಲೆ ಮತ್ತು ಕಾಲೇಜಿಗೆ ಪ್ರತಿದಿನ ದೂರ ಪ್ರಯಾಣ ಮಾಡುವ ವಿದ್ಯಾರ್ಥಿಗಳಿಗೆ ಈ ಪಾಸ್ ಮೂಲಕ ಆರ್ಥಿಕ ನೆರವು ದೊರೆಯುತ್ತದೆ. ಸಾವಿರಾರು ರೂಪಾಯಿ ಪ್ರಯಾಣ ವೆಚ್ಚ ಉಳಿಯುವುದರಿಂದ ಪೋಷಕರಿಗೂ ಸಹ ಈ ಯೋಜನೆ ಬಹಳ ಪ್ರಯೋಜನಕಾರಿಯಾಗಿದೆ.
KSRTC Bus Pass ಎಂದರೇನು?
KSRTC ವಿದ್ಯಾರ್ಥಿ ಬಸ್ ಪಾಸ್ ಎನ್ನುವುದು ಶಾಲೆ, ಕಾಲೇಜು ಮತ್ತು ವೃತ್ತಿಪರ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಸರಕಾರ ನೀಡುವ ವಿಶೇಷ ಪ್ರಯಾಣ ಸೌಲಭ್ಯವಾಗಿದೆ. ಈ ಪಾಸ್ ಹೊಂದಿರುವವರು ವಿದ್ಯಾರ್ಥಿಗಳು ಸರಕಾರಿ ಬಸ್ಸುಗಳಲ್ಲಿ ಕಡಿಮೆ ದರದಲ್ಲಿ ಅಥವಾ ಕೆಲವು ಸಂದರ್ಭಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು.
ಪ್ರತಿದಿನ ಕಾಲೇಜಿಗೆ ಹೋಗು ವಿದ್ಯಾರ್ಥಿಗಳಿಗೆ ಸಾಮಾನ್ಯ ಟಿಕೆಟ್ ಖರೀದಿಸುವ ಅವಶ್ಯಕತೆ ಇರುವುದಿಲ್ಲ. ಒಂದು ಬಾರಿ ಪಾಸ್ ಪಡೆದ ನಂತರ ನಿರ್ದಿಷ್ಟ ಮಾರ್ಗದಲ್ಲಿ ಸುಲಭವಾಗಿ ಪ್ರಯಾಣಿಸಬಹುದು ಯೋಜನೆಗಳಿಂದ ವಿದ್ಯಾರ್ಥಿಗಳ ಸಮಯ ಮತ್ತು ಹಣ ಎರಡು ಉಳಿಯುತ್ತವೆ.
ರಾಜ್ಯದಲ್ಲಿ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು KSRTC, BMTC, NWKRTC ಮತ್ತು KKRTC ಬಸ್ ಸೇವೆಗಳಲ್ಲಿ ಈ ಪಾಸ್ ಬಳಸಬಹುದು. ನಗರ ಪ್ರದೇಶ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಈ ಯೋಜನೆ ಬಹಳ ಉಪಯುಕ್ತವಾಗಿದೆ.
ಯೋಜನೆಯ ಮುಖ್ಯ ಉದ್ದೇಶ
ಈ ಯೋಜನೆ ಮುಖ್ಯ ಉದ್ದೇಶ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯಲು ಸುಲಭ ಸಂಚಾರ ವ್ಯವಸ್ಥೆ ಒದಗಿಸುವುದು. ಹಲವಾರು ವಿದ್ಯಾರ್ಥಿಗಳು ದೂರದ ಊರುಗಳಿಂದ ಶಾಲೆಗೆ ಅಥವಾ ಕಾಲೇಜಿಗೆ ಪ್ರಯಾಣ ಮಾಡುತ್ತಾರೆ. ಪ್ರಯಾಣ ವೆಚ್ಚ ಹೆಚ್ಚಾದರೆ ಕೆಲವು ಕುಟುಂಬಗಳಿಗೆ ಮಕ್ಕಳ ಶಿಕ್ಷಣ ಮುಂದೊರಿಸುವುದು ಕಷ್ಟವಾಗಬಹುದು.
ಈ ಹಿನ್ನೆಲೆಯಲ್ಲಿ ಸರ್ಕಾರ ಕಡಿಮೆ ವೆಚ್ಚದಲ್ಲಿ ಪ್ರಯಾಣ ಸೌಲಭ್ಯ ನೀಡಿ ಶಿಕ್ಷಣಕ್ಕೆ ಉತ್ತೇಜನ ನೀಡುತ್ತಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಇದು ಶಿಕ್ಷಣ ಮುಂದುವರೆಸಲು ದೊಡ್ಡ ಸಹಾಯಕವಾಗಿದೆ.
ಈ ಯೋಜನೆ ವಿದ್ಯಾರ್ಥಿಗಳ ಜೊತೆಗೆ ಪೋಷಕರಿಗೆ ದೊಡ್ಡ ನೆರವಾಗಿದೆ. ಮಕ್ಕಳ ಶಿಕ್ಷಣ ವೆಚ್ಚದ ಜೊತೆಗೆ ಸಂಚಾರ ವೆಚ್ಚವು ಕಡಿಮೆಯಾಗಿರುವುದರಿಂದ ಕುಟುಂಬಗಳಿಗೆ ಆರ್ಥಿಕ ಸಹಾಯ ದೊರೆಯುತ್ತದೆ. ಹಲವಾರು ಕುಟುಂಬಗಳಲ್ಲಿ ಇಬ್ಬರು ಅಥವಾ ಮೂವರು ಮಕ್ಕಳು ಓದುತ್ತಿರುತ್ತಾರೆ. ಪ್ರತಿದಿನ ಪ್ರಯಾಣ ವೆಚ್ಚ ಹಬ್ಬ ಭರಿಸುವುದು ಕೆಲವೊಮ್ಮೆ ಕಷ್ಟವಾಗುತ್ತದೆ. ಬಸ್ ಪಾಸ್ ಯೋಜನೆಯಿಂದ ಈ ಸಮಸ್ಯೆಗೆ ಪರಿಹಾರ ದೊರೆತಿದೆ.
ಯಾರಿಗೆ ಅರ್ಜಿ ಹಾಕಬಹುದು ?
ಈ ಯೋಜನೆಯಡಿ ಹಲವು ವರ್ಗದ ವಿದ್ಯಾರ್ಥಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಸರ್ಕಾರಿ ಶಾಲಾ ವಿದ್ಯಾರ್ಥಿಗಳು, ಖಾಸಗಿ ಶಾಲಾ ವಿದ್ಯಾರ್ಥಿಗಳು, ಪಿಯುಸಿ ವಿದ್ಯಾರ್ಥಿಗಳು, ಪದವಿ ವಿದ್ಯಾರ್ಥಿಗಳು ಡಿಪ್ಲೋಮಾ ಹಾಗೂ ಐಟಿಐ ವಿದ್ಯಾರ್ಥಿಗಳು ಸೇರಿದಂತೆ ಅನೇಕ ವರ್ಗದ ವಿದ್ಯಾರ್ಥಿಗಳು ಈ ಯೋಜನೆ ಲಾಭ ಪಡೆಯಬಹುದು. ಇಂಜಿನಿಯರಿಂಗ್, ನರ್ಸಿಂಗ್ ವಿದ್ಯಾರ್ಥಿಗಳು, ಪಾಲಿಟೆಕ್ನಿಕ್ ವಿದ್ಯಾರ್ಥಿಗಳು, ಪೋಸ್ಟ್ ಗ್ರಾಜುಯೇಷನ್ ವಿದ್ಯಾರ್ಥಿಗಳು, ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳು ಹಾಗೂ ವೃತ್ತಿಪರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಯೋಜನೆ ಅನ್ವಯಿಸುತ್ತದೆ.
ಶಾಲೆ ಅಥವಾ ಕಾಲೇಜಿನಲ್ಲಿ ನಿಯಮಿತವಾಗಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ ಈ ಯೋಜನೆಗೆ ಅರ್ಹರಾಗಿರುತ್ತಾರೆ.
ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
ಅರ್ಜಿ ಸಲ್ಲಿಸುವುದು ಎಲ್ಲ ದಾಖಲೆಗಳನ್ನು ಸಿದ್ಧವಾಗಿಡಿ. ಕೊನೆಯ ದಿನಾಂಕದವರೆಗೆ ಕಾಯಬೇಡಿ.Portal Slow ಆಗುವುದು ಸಾಧ್ಯತೆ ಇರುತ್ತದೆ. ಸರಿಯಾದ ಮಾಹಿತಿಯನ್ನೇ ನಮೂದಿಸಿ. Application Number ಕಳೆದುಕೊಳ್ಳಬೇಡಿ. ಆದ್ದರಿಂದ ಎಲ್ಲರೂ ಇದನ್ನು ಗಮನದಲ್ಲಿಟ್ಟುಕೊಂಡು ಅರ್ಜಿ ಸಲ್ಲಿಸಬೇಕು.
ಅಗತ್ಯ ದಾಖಲೆಗಳು
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೆಲವು ಅಗತ್ಯ ದಾಖಲೆಗಳು ಸಿದ್ಧವಾಗಿ ಇಟ್ಟುಕೊಳ್ಳಬೇಕು. ವಿದ್ಯಾರ್ಥಿ ಆಧಾರ್ ಕಾರ್ಡ್, ಶಾಲೆ ಅಥವಾ ಕಾಲೇಜಿನಿಂದ ನೀಡುವ Study Certificate, ಇತ್ತೀಚಿನ ಪಾಸ್ಪೋರ್ಟ್ ಸೈಜ್ ಫೋಟೋ, ಸಕ್ರಿಯ ಮೊಬೈಲ್ ಸಂಖ್ಯೆ ಹಾಗೂ ವಿಳಾಸದ ದಾಖಲೆ ಅಗತ್ಯವಿರುತ್ತದೆ. ಕಾಲೇಜ್ ವಿದ್ಯಾರ್ಥಿಗಳು ತಮ್ಮ College ID ಕೂಡ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವ ಹೆಸರು ಹಾಗೂ Study Certificate ನಲ್ಲಿರುವ ಹೆಸರು ಒಂದೇ ರೀತಿಯಾಗಿರಬೇಕು. ಯಾವುದೇ ತಪ್ಪು ಮಾಹಿತಿ ನೀಡಿದರೆ ಅರ್ಜಿ ತಿರಸ್ಕೃತವಾಗುವ ಸಾಧ್ಯತೆ ಇದೆ.
ಅರ್ಜಿ ಸಲ್ಲಿಸುವ ವಿಧಾನ
Seva Sindhu Portal ಮೂಲಕ ಅರ್ಜಿ ಸಲ್ಲಿಸುವ ವಿಧಾನ ಬಹಳ ಸರಳವಾಗಿದೆ. ಮೊದಲು ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ ತೆರೆಯಬೇಕು. ನಂತರ “Student Bus Pass” ಆಯ್ಕೆಯನ್ನು ಕ್ಲಿಕ್ ಮಾಡಿ ಮೊಬೈಲ್ ಸಂಖ್ಯೆ ಮೂಲಕ Login ಮಾಡಬೇಕು. ನಂತರ ವಿದ್ಯಾರ್ಥಿಯ ಹೆಸರು, ವಿಳಾಸ, ಶಾಲೆ ಅಥವಾ ಕಾಲೇಜಿನ ಮಾಹಿತಿ, ಕೋರ್ಸ್ ವಿವರ ಹಾಗೂ ಪ್ರಯಾಣ ವರ್ಗವನ್ನು ಸರಿಯಾಗಿ ನಮೂದಿಸಬೇಕು. ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ನಂತರ Submit ಮೇಲೆ ಕ್ಲಿಕ್ ಮಾಡಬೇಕು. ಅಜ್ಜಿಯ ಶಿಶುವಾಗಿ ಸಲ್ಲಿಸಿದ ನಂತರ Application Number ಬರುತ್ತದೆ. ಅದನ್ನು ಮುಂದಿನ ಬಳಕೆಗೆ ಸೂಕ್ತವಾಗಿ ಉಳಿಸಿಕೊಳ್ಳಬೇಕು.
ಆನ್ಲೈನ್ ಅರ್ಜಿ ಆರಂಭವಾಗಿರುವುದರಿಂದ ವಿದ್ಯಾರ್ಥಿಗಳಿಗೆ ಹಲವು ಅನುಕೂಲಗಳು ದೊರೆಯುತ್ತಿವೆ. ಮೊದಲು ವಿದ್ಯಾರ್ಥಿಗಳು ಬಸ್ ಪಾಸ್ ಪಡೆಯಲು ವಿವಿಧ ಕಚೇರಿಗೆ ಹೋಗಬೇಕಿತ್ತು, ಈಗ ಮನೆಯಲ್ಲಿ ಕುಳಿತು ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ಅರ್ಜಿ ಸಲ್ಲಿಸ ಬಹುದು. ಇದರಿಂದ ಸುಮಾರು ಉಳಿತಯವಾಗುತ್ತದೆ. ಸೈಬರ್ ಸೆಂಟರ್ ಗೆ ಹೋಗವ ಅವಶ್ಯಕತೆ ಕಡಿಮೆಯಾಗುತ್ತದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಈ ಡಿಜಿಟಲ್ ವ್ಯವಸ್ಥೆ ಬಹಳ ಸಹಾಯಕವಾಗಿದೆ.
ವಿದ್ಯಾರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಸಾಧ್ಯವಾದಷ್ಟು ಬೇಗ ಅರ್ಜಿ ಸಲ್ಲಿಸುವುದು ಉತ್ತಮ. ಕೊನೆಯ ದಿನಾಂಕದಲ್ಲಿ Portal ನಲ್ಲಿ ಹೆಚ್ಚಿನ ಒತ್ತಡ ಇರುವುದರಿಂದ Servar Slow ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಮೊದಲೇ ಅರ್ಜಿ ಸಲ್ಲಿಸಿದರೆ ಯಾವುದೇ ತೊಂದರೆ ಎದುರಾಗುವುದಿಲ್ಲ. ಎಲ್ಲಾ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಂಡು ಸರಿಯಾದ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.
Bus pass Status ಹೇಗೆ ಚೆಕ್ ಮಾಡುವುದು
ವಿದ್ಯಾರ್ಥಿಗಳು ತಮ್ಮ Bus Pass Status ಅನ್ನು ಆನ್ಲೈನ್ ನಲ್ಲಿ ಪರಿಶೀಲಿಸಬಹುದು.
Application Number ನಮೂದಿಸಿ, Status ಆಯ್ಕೆ ತೆಗೆಯಿರಿ, ಅರ್ಜಿ Approved ಆಗಿದೆ ಎಂಬುದು ಪರಿಶೀಲಿಸಿ.
ಈ ಮೂಲಕ ವಿದ್ಯಾರ್ಥಿಗಳು ತಮ್ಮ ಅರ್ಜಿ ಸ್ಥಿತಿಯನ್ನು ಸುಲಭವಾಗಿ ತಿಳಿದುಕೊಳ್ಳಬಹುದು.
Bus pass ವಿತರಣೆ ಹೇಗೆ ನಡೆಯುತ್ತದೆ
ಅರ್ಜಿಗಳು ಪರಿಶೀಲನೆಯಾದ ನಂತರ ವಿದ್ಯಾರ್ಥಿಗಳಿಗೆ Bus pass ವಿತರಣೆ ಮಾಡಲಾಗುತ್ತದೆ. ಕೆಲವು ಜಿಲ್ಲೆಗಳಲ್ಲಿ ಕಾಲೇಜುಗಳ ಮೂಲಕ ವಿತರಣೆ ಮಾಡಬಹುದು. ಕೆಲವೊಮ್ಮೆ ವಿದ್ಯಾರ್ಥಿಗಳು ನಿಗದಿತ ಕೇಂದ್ರಗಳಿಗೆ ಹೋಗಿ ಪಡೆಯಬೇಕಾಗಬಹುದು.
Bus pass ಪಡೆದ ನಂತರ ವಿದ್ಯಾರ್ಥಿಗಳು ಅದನ್ನು ಸುರಕ್ಷಿತವಾಗಿ ಬಳಸಬೇಕು. ಪ್ರಯಾಣ ಸಮಯದಲ್ಲಿ Bus pass ಕಡ್ಡಾಯವಾಗಿ ಜೊತೆ ಇಟ್ಟುಕೊಳ್ಳಬೇಕು. Bus pass ಕಳೆದು ಹೋದರೆ ಸಂಬಂಧಿಸಿದ ಕಚೇರಿಗೆ ಮಾಹಿತಿ ನೀಡಬೇಕು. ನಿಯಮಗಳನ್ನು ಪಾಲಿಸಿ ಪ್ರಯಾಣ ಮಾಡುವುದು ವಿದ್ಯಾರ್ಥಿಗಳ ಜವಾಬ್ದಾರಿಯಾಗಿದೆ.
ಕೊನೆಯ ಮಾತು
ಪ್ರತಿದಿನ ಶಾಲೆ ಹಾಗೂ ಕಾಲೇಜುಗಳಿಗೆ ಪ್ರಯಾಣ ಮಾಡುವ ವಿದ್ಯಾರ್ಥಿಗಳಿಗೆ KSRTC Bus pass ಯೋಜನೆ ಅತ್ಯಂತ ಉಪಯುಕ್ತವಾಗಿದೆ. ಕಡಿಮೆ ವೆಚ್ಚದಲ್ಲಿ ಸುರಕ್ಷಿತ ಮತ್ತು ಸುಲಭ ಪ್ರಯಾಣ ಸೌಲಭ್ಯ ಒದಗಿಸುವುದು ನೆರವಾಗುತ್ತಿದೆ.
ಈಗ ಆನ್ಲೈನ್ ಅರ್ಜಿ ವ್ಯವಸ್ಥೆ ಆರಂಭವಾಗಿರುವುದರಿಂದ ವಿದ್ಯಾರ್ಥಿಗಳು ಮನೆಯಲ್ಲಿ ಕುಳಿತು ಸುಲಭವಾಗಿ ಅರ್ಜಿ ಸಲ್ಲಿಸಬಹುದು. ಹೀಗಾಗಿ ಅರ್ಹ ವಿದ್ಯಾರ್ಥಿಗಳು ತಕ್ಷಣ Seva Sindhu Portal ಮೂಲಕ ಅರ್ಜಿ ಹಾಕಿ ಈ ಸೌಲಭ್ಯವನ್ನು ಪಡೆದುಕೊಳ್ಳುವುದು ಉತ್ತಮ.
ಕೊನೆ ದಿನಾಂಕದವರೆಗೆ ಕಾಯದೆ ಇಂದೇ ಅರ್ಜಿ ಸಲ್ಲಿಸಿ ಸರ್ಕಾರದ ಈ ಮಹತ್ವದ ಯೋಜನೆಯ ಪ್ರಯೋಜನ ಪಡೆದುಕೊಳ್ಳಿ. ಶಿಕ್ಷಣದ ದಾರಿಯಲ್ಲಿ ಸಂಚಾರ ಸಮಸ್ಯೆ ಅಡ್ಡಿಯಾಗದಂತೆ Bus pass ಯೋಜನೆ ವಿದ್ಯಾರ್ಥಿಗಳಿಗೆ ದೊಡ್ಡ ಸಹಾಯವಾಗಿದೆ. ಆದ್ದರಿಂದ ಎಲ್ಲರೂ ಆದಷ್ಟು ಬೇಗ ಅರ್ಜಿ ಸಲ್ಲಿಸಿ.