Telegram Join My Telegram WhatsApp Join My WhatsApp

RRI Recruitment 2026 : ಬೆಂಗಳೂರಿನ ರಾಯನ್ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗವಕಾಶ  – ತಿಂಗಳಿಗೆ₹ 31,000  ಸಂಬಳ, ಪದವೀಧರರಿಗೆ ಸುವರ್ಣ ಅವಕಾಶ!

RRI RRI Recruitment 2026 : ಬೆಂಗಳೂರಿನ ರಾಯನ್ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗವಕಾಶ  – ತಿಂಗಳಿಗೆ₹ 31,000  ಸಂಬಳ, ಪದವೀಧರರಿಗೆ ಸುವರ್ಣ ಅವಕಾಶ!

ವಿಜ್ಞಾನ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ವೃತ್ತಿ ಜೀವನ ಕಟ್ಟಿಕೊಳ್ಳಲು ಬಯಸುವವರಿಗೆ ಭರ್ಜರಿ ಅವಕಾಶ 

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಹಾಗೂ ಪ್ರತಿಷ್ಠ ಸಂಸ್ಥೆಗಳಲ್ಲಿ ಉದ್ಯೋಗ ಪಡೆಯಲು ಸಾವಿರಾರು ಅಭ್ಯರ್ಥಿಗಳು ಪ್ರಯತ್ನಿಸುತ್ತಾರೆ. ವಿಶೇಷವಾಗಿ ವಿಜ್ಞಾನ, ತಂತ್ರಜ್ಞಾನ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಯುವಕರು ಉತ್ತಮ ಅವಕಾಶಗಳಿಗಾಗಿ ಕಾಯುತ್ತಿರುತ್ತಾರೆ. ಅಂತ ಅಭ್ಯರ್ಥಿಗಳಿಗೆ ಇದೀಗ ದೇಶದ ಹೆಸರಾಂತ ಸಂಶೋಧನಾ ಸಂಸ್ಥೆಯಲ್ಲಿ ಒಂದಾದ ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್ (RRI) ನಿಂದ ಸುವರ್ಣಾವಕಾಶ ದೊರೆತಿದೆ.

ಬೆಂಗಳೂರ್ ನಗರದ ಕಾರ್ಯನಿರ್ವಹಿಸುತ್ತಿರುವ ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್ ವಿವಿಧ ವಿಭಾಗಗಳಲ್ಲಿ ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹ 31,000 ವೇತನದ ಜೊತೆಗೆ HRA ಸೇರಿದಂತೆ ಇದ್ದರೆ ಸೌಲಭ್ಯಗಳು ಲಭ್ಯವಾಗಲಿದೆ. ಸಂಶೋಧನಾ ಕ್ಷೇತ್ರದಲ್ಲಿ ಭವಿಷ್ಯ ನಿರ್ಮಿಸಿಕೊಳ್ಳಲು ಬಯಸುವವರಿಗೆ ಇದು ಉತ್ತಮ ಅವಕಾಶವಾಗಿದೆ.

ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್ (RRI) ಎಂದರೇನು?

ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್ ಅಥವಾ RRI ಭಾರತದ ಅತ್ಯಂತ ಪ್ರತಿಷ್ಠ ಮೂಲಭೂತ ವಿಜ್ಞಾನ ಸಂಶೋಧನಾ ಸಂಸ್ಥೆಗಳಲ್ಲಿ ಒಂದಾಗಿದೆ. ಈ ಸಂಸ್ಥೆಯನ್ನು ಭಾರತ ಹೆಮ್ಮೆಯ ವಿಜ್ಞಾನಿ ಹಾಗೂ ನೊಬೆಲ್ ಪ್ರಶಸ್ತಿ ವಿಜೇತ ಸರ್ ಸಿ.ವಿ.ರಾಮನ್ ಅವರು 1948ರಲ್ಲಿ ಸ್ಥಾಪಿಸಿದರು.

ಭೌತಶಾಸ್ತ್ರ, ಖಗೋಳ ವಿಜ್ಞಾನ, ಬೆಳಕಿನ ವಿಜ್ಞಾನ ಕ್ವಾಂಟಮ್ ವಿಜ್ಞಾನ, ರೇಡಿಯೋ ಖಗೋಳಶಾಸ್ತ್ರ ಮತ್ತು ಅನೇಕ ಆಧುನಿಕ ವೈಜ್ಞಾನಿಕ ಕ್ಷೇತ್ರಗಳಲ್ಲಿ RRI ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆ. ದೇಶದ ವಿವಿಧ ಭಾಗದಿಂದ ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಸಂಶೋಧಕರು ಈ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಬೆಂಗಳೂರು ನಗರದ ಶಾಂತ ಮತ್ತು ಹಸಿರು ವಾತಾವರಣದಲ್ಲಿರುವ ಈ ಸಂಸ್ಥೆ ಸಂಶೋಧನೆಗೆ ಅತ್ಯುತ್ತಮ ಸೌಲಭ್ಯಗಳನ್ನು ಒದಗಿಸುತ್ತದೆ. ಇಲ್ಲಿ ಕೆಲಸ ಮಾಡುವುದರಿಂದ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ವಿಜ್ಞಾನಿಗಳೊಂದಿಗೆ ಕೆಲಸ ಮಾಡುವ ಅವಕಾಶ ಸಿಗುತ್ತದೆ.

RRI Recruitment 2026 ಪ್ರಮುಖ ಮಾಹಿತಿ 

2026 ನೇ ಸಾಲಿನ ನೇಮಕಾತಿ ಅಧಿಸೂಚನೆಯ ಮೂಲಕ ಸಂಸ್ಥೆ ವಿವಿಧ ಸಂಶೋಧನಾ ವಿಭಾಗಗಳಲ್ಲಿ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳು ಭರ್ತಿ ಮಾಡಲಾಗುತ್ತಿದೆ. ವಿಜ್ಞಾನ ಮತ್ತು ತಾಂತ್ರಿಕ ಕ್ಷೇತ್ರಗಳಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಪ್ರಮುಖ ಆಕರ್ಷಣೆ ಎಂದರೆ ಯಾವುದೇ ಶುಲ್ಕ ಇರುವುದಿಲ್ಲ. ಜೊತೆಗೆ ಅಭ್ಯರ್ಥಿಗಳ ಆಯ್ಕೆ ಮುಖ್ಯವಾಗಿ ಸಂದರ್ಶನದ ಮೂಲಕ ನಡೆಯಲಿದೆ.

ಉದ್ಯೋಗದ ಮುಖ್ಯ ಅಂಶಗಳು 

ಸಂಸ್ಥೆಯು ಪ್ರಕಟಿಸಿರುವ ಮಾಹಿತಿ ಪ್ರಕಾರ ವಿದ್ಯಾರ್ಥಿಗಳಿಗೆ ಬೆಂಗಳೂರು ನಗರದಲ್ಲಿ ಕೆಲಸ ಮಾಡುವ ಅವಕಾಶ ದೊರೆಯಲಿದೆ. ಇದು ಸಂಶೋಧನ ವೃತ್ತಿ ಜೀವನದ ಆರಂಭಿಸಲು ಅತ್ಯುತ್ತಮ ವೇದಿಕೆಯಾಗಿದೆ. ಉದ್ಯೋಗದ ಪ್ರಮುಖ ಅಂಶಗಳು ಗಮನಿಸಿದರೆ, ಉತ್ತಮ ವೇತನ, ಪ್ರತಿಷ್ಠಿತ ಸಂಸ್ಥೆಯ ಅನುಭವ, ಸಂಶೋಧನಾ ಕ್ಷೇತ್ರದಲ್ಲಿ ಬೆಳವಣಿಗೆ ಹಾಗೂ ಭವಿಷ್ಯದ ಅಧ್ಯಯನ ಅಧ್ಯಯನಗಳಿಗೆ ಅನುಕೂಲವಾಗುವಂತೆ ಅವಕಾಶ ದೊರೆಯುತ್ತದೆ.

ಹುದ್ದೆಗಳ ವಿವರ 

ಈ ನೇಮಕತಿಯಡಿ  ವಿವಿಧ ಸಂಶೋಧನಾ ವಿಭಾಗಗಳಲ್ಲಿ ಹುದ್ದೆಗಳನ್ನು ಪ್ರಕಟಿಸಲಾಗಿದೆ. ಪ್ರತಿ ವಿಭಾಗಕ್ಕೂ ವಿಭಿನ್ನ ಶೈಕ್ಷಣಿಕ ಅರ್ಹತೆ ಮತ್ತು ಕೌಶಲ್ಯಗಳನ್ನು ಪರಿಗಣಿಸಲಾಗುತ್ತದೆ.

LAMP ವಿಭಾಗ

LAMP ವಿಭಾಗದಲ್ಲಿ ಒಟ್ಟು ಎರಡು ಹುದ್ದೆಗಳು ಲಭ್ಯವಿದೆ ಈ ವಿಭಾಗದಲ್ಲಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳು ಭೌತಶಾಸ್ತ್ರ, ಎಲೆಕ್ಟ್ರಾನಿಕ್ಸ್ ಹಾಗೂ ಸಂಬಂಧಿಸಿದ ತಾಂತ್ರಿಕ ಕ್ಷೇತ್ರಗಳಲ್ಲಿ ಸಂಶೋಧನಾ ಚಟುವಟಿಕೆಗಳಲ್ಲಿ ಭಾಗವಹಿಸಲಾಗುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭೌತಶಾಸ್ತ್ರ ಅಥವಾ ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಉತ್ತಮ ಶೈಕ್ಷಣಿಕ ಹಿನ್ನೆಲೆ ಹೊಂದಿರಬೇಕು. ಸಂಶೋಧನಾ ಯೋಜನೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ದೊರೆಯುತ್ತದೆ.

ಈ ಭಾಗದ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಜೂನ್ 24, 2026 ಆಗಿದೆ

Soft Condensed Matter Group 

ಸಾಫ್ಟ್  ಕಂಡೆನ್ಸ್ಡ್ ಮ್ಯಾಟರ್ ಗ್ರೂಪ್ ವಿಭಾಗದಲ್ಲಿ ಒಟ್ಟು ಐದು ಹುದ್ದೆಗಳು ಲಭ್ಯವಿದೆ. ಈ ವಿಭಾಗವು ಜೀವ ವಿಜ್ಞಾನ ಬೌತಶಾಸ್ತ್ರ ಮತ್ತು ವಸ್ತು ವಿಜ್ಞಾನದ ಸಂಯೋಜನೆಯೊಂದಿಗೆ ಸಂಶೋಧನೆ ನಡೆಸುತ್ತದೆ.

ಮೈಕ್ರೋಫ್ಲೂಯಿಡಿಕ್ಸ್, ಬಯೋಫೀಸಿಕ್ಸ್ ಹಾಗೂ ಸಂಬಂಧಿತ ಸಂಶೋಧ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಈ ವಿಭಾಗದಲ್ಲಿ ಹೆಚ್ಚಿನ ಅವಕಾಶಗಳಿವೆ.

ಈ ವಿಭಾಗದ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :  ಜೂನ್ 20, 2026 ಆಗಿದೆ.

ವಿದ್ಯಾರ್ಹತೆ ವಿವರ 

RRI ನೇಮಕಾತಿ 2026 ಆಧಿಸೂಚನೆಯ ಪ್ರಕಾರ ವಿವಿಧ ಸಂಶೋಧನೆ ವಿಭಾಗದಲ್ಲಿ ಖಾಲಿ ಇರುವ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆಯಿಂದ ಸಂಬಂಧಿತ ವಿಷಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಬೇಕು.

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಉತ್ತಮ ಶೈಕ್ಷಣಿಕ ಹಿನ್ನೆಲೆ ಹೊಂದಿರುವ ಅಭ್ಯರ್ಥಿಗಳಿಗೆ ಈ ನೇಮಕಾತಿ ವಿಶೇಷವಾಗಿ ಅನುಕೂಲಕರವಾಗಿದೆ. ಸಂಶೋಧನ ಚಟುವಟಿಕೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

B. E/B.Tech, M. E/M.Tech, B. Sc, M. Sc, Physics, Electronics, Engineering Physics, Applied Physics, Instrumentation, ಸಂಬಂಧಿತ ತಾಂತ್ರಿಕ ಮತ್ತು ವೈಜ್ಞಾನಿಕ ವಿಷಯಗಳು.

ಕೆಲವು ಹುದ್ದೆಗಳಿಗೆ ಕನಿಷ್ಠ 60 ಪ್ರತಿಶತ ಅಂಕಗಳೊಂದಿಗೆ ಉತ್ತೀರ್ಣರಾಗಿರುವುದು ಅಗತ್ಯವಾಗಿರಬಹುದು. ಆದ್ದರಿಂದ ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದುವುದು ಸೂಕ್ತ. ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ. 

ವಯೋಮಿತಿ ವಿವರ 

ಸಂಸ್ಥೆಯು  ಪ್ರಕಟಿಸಿರುವ ಮಾಹಿತಿ ಪ್ರಕಾರ ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷಗಳಾಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಆಧಾರದ  ಮೇಲೆ ವಯಸ್ಸನ್ನು ಪರಿಗಣಿಸಲಾಗುತ್ತದೆ.

ಸರ್ಕಾರದ ನಿಯಮ ಅನುಸಾರ ಮೀಸಲಾತಿ ವರ್ಗಗಳಿಗೆ ವಯೋ ಸಡಿಲಿಕೆ ಲಭ್ಯವಿರುತ್ತದೆ.

  • SC ಅಭ್ಯರ್ಥಿಗಳಿಗೆ ನಿಯಮನುಸಾರ ಸಡಿಲಿಕೆ
  • ST ಅಭ್ಯರ್ಥಿಗಳಿಗೆ ನಿಯಮನುಸಾರ  ಸಡಿಲಿಕೆ
  • OBC ಅಭ್ಯರ್ಥಿಗಳಿಗೆ ನಿಯಮನುಸಾರ ಸಡಿಲಿಕೆ
  • PWD ಅಭ್ಯರ್ಥಿಗಳಿಗೆ ವಿಶೇಷ ವಯೋ ಸಡಿಲಿಕೆ

ಅರ್ಜಿ ಸಲ್ಲಿಸುವ ವೇಳೆ ಸಂಬಂಧಿತ ಪ್ರಮಾಣ ಪತ್ರಗಳನ್ನು ಒದಗಿಸಬೇಕಾಗುತ್ತದೆ.

ವೇತನದ ಸಂಪೂರ್ಣ ಮಾಹಿತಿ 

ಯಾವುದೇ ಉದ್ಯೋಗದ ಆಯ್ಕೆಯಲ್ಲಿ ವೇತನವು ಪ್ರಮುಖ ಪಾತ್ರ ವಹಿಸುತ್ತದೆ. RRI ನೇಮಕಾತಿಯ ವಿಶೇಷತೆ ಎಂದರೆ ಆರಂಭಿಕ ಹಂತದಲ್ಲಿ ಉತ್ತಮ ವೇತನವನ್ನು ನೀಡಲಾಗುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹31,000 ಮೂಲ ವೇತನ ದೊರೆಯಲಿದೆ. ಇದರ ಜೊತೆಗೆ HRA ಸೇರಿದಂತೆ ಇತರೆ ಸೌಲಭ್ಯಗಳನ್ನು ಸಂಸ್ಥೆಯ ನಿಯಮನುಸಾರ ನೀಡಲಾಗುತ್ತದೆ.

ಅಭ್ಯರ್ಥಿಗಳಿಗೆ ದೊರೆಯುವ ಸೌಲಭ್ಯಗಳು 

₹31,000 ಮಾನಸಿಕ ವೇತನ, HRA ಸೌಲಭ್ಯ, ಉನ್ನತ ಮಟ್ಟದ ಸಂಶೋಧನ ವಾತಾವರಣ, ಅನುಭವಿ ವಿಜ್ಞಾನಿಗಳ ಮಾರ್ಗದರ್ಶನ, ವೈಜ್ಞಾನಿಕ ಯೋಜನೆಗಳಲ್ಲಿ ಭಾಗವಹಿಸುವ ಅವಕಾಶ, ಭವಿಷ್ಯದ ವೃತ್ತಿ ಬೆಳವಣಿಗೆಗೆ ಅನುಕೂಲ.

ಸಾಮಾನ್ಯವಾಗಿ ಸಂಶೋಧನ ಕ್ಷೇತ್ರದಲ್ಲಿ ಆರಂಭಿಕ ಹಂತದಲ್ಲಿ ಇಂತಹ ವೇತನ ದೊರೆಯುವುದು ತುಂಬಾ ಒಳ್ಳೆಯ ವಿಷಯವಾಗಿದೆ.

ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ ?

RRI ನೇಮಕಾತಿಯ ಪ್ರಮುಖ ವಿಶೇಷತೆ ಎಂದರೆ ಬಹುತೇಕ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಇರುವುದಿಲ್ಲ. ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ, ಅನುಭವ ಮತ್ತು ಸಂದರ್ಶನದ ಪ್ರದರ್ಶನದ ಆಧಾರದ ಮೇಲೆ ಆಯ್ಕೆ ನಡೆಯುತ್ತದೆ.

ಮೊದಲನೇ ಹಂತದಲ್ಲಿ ಅರ್ಜಿ ಸಲ್ಲಿಸ್ತಾ ಅಭ್ಯರ್ಥಿಗಳ ದಾಖಲೆಯನ್ನು  ಪರಿಶೀಲಿಸಲಾಗುತ್ತದೆ. ಎರಡನೇ ಹಂತದಲ್ಲಿ ಅಭ್ಯರ್ಥಿಗಳ ವಿದ್ಯಾರ್ಹತೆ, ಅಂಕಗಳು ಹಾಗೂ ಅನುಭವವನ್ನು ಆಧರಿಸಿ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಮೂರನೇ ಹಂತದಲ್ಲಿ ಶಾರ್ಟ್ ಲಿಸ್ಟ್ ಆದ ಅಭ್ಯರ್ಥಿಗಳನ್ನು ಆನ್ಲೈನ್ ಅಥವಾ ನೇರ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ನಾಲ್ಕನೇ ಹಂತದಲ್ಲಿ ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ. ಈ ರೀತಿ ಆಯ್ಕೆ ಪ್ರಕ್ರಿಯೆ ಇರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ 

RRI Recruitment 2026 ಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂಪೂರ್ಣವಾಗಿ ಆನ್ಲೈನ್ ಮೂಲಕ ಸಲ್ಲಿಸಬೇಕು. ಅರ್ಜಿ ಪ್ರಕ್ರಿಯೆ ಸರಳವಾಗಿದ್ದು ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ನಲ್ಲಿ ರಬ್ಬಿರುವ ಸೂಚನೆಗಳನ್ನು ಅನುಸರಿಸಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳು, ಗುರುತಿನ ಚೀಟಿ, ಪಾಸ್ಪೋರ್ಟ್ ಗಾತ್ರದ ಫೋಟೋ ಹಾಗೂ ಇತರ ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವುದು  ಉತ್ತಮ.

ಮೊದಲನೇ ಹಂತದಲ್ಲಿ  ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ.

ಎರಡನೇ ಹಂತದಲ್ಲಿ ಸಂಬಂಧಿತ ಅಧಿಸೂಚನೆಯನ್ನು ಓದಿ. ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಬಗ್ಗೆ ಸ್ಪಷ್ಟ ಮಾಹಿತಿ ತಿಳಿದುಕೊಳ್ಳಬೇಕು.

ಮೂರನೇ ಹಂತದಲ್ಲಿ ಅರ್ಜಿ ಫಾರ್ಮ್ ತೆಗೆಯಿರಿ. ಆನ್ಲೈನ್ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಫಾರ್ಮ್ ತೆರೆಯಬೇಕು. ಆಮೇಲೆ ಅಗತ್ಯವಿರುವ ವೈಯಕ್ತಿಕ ಮಾಹಿತಿ ಶೈಕ್ಷಣಿಕ ವಿವರಗಳು ಮತ್ತು ಸಂಪರ್ಕ ಮಾಹಿತಿಯನ್ನು ನಮೂದಿಸಬೇಕು.

ನಾಲ್ಕನೇ ಹಂತದಲ್ಲಿ ದಾಖಲೆಯನ್ನು ಅಪ್ಲೋಡ್ ಮಾಡಿ. ಅಗತ್ಯವಿರುವ ಎಲ್ಲಾ ದಾಖಲೆಯನ್ನು ನಿಗದಿತ ಗಾತ್ರದಲ್ಲಿ ಅಪ್ಲೋಡ್ ಮಾಡಬೇಕು.

ಐದನೇ ಹಂತದಲ್ಲಿ ಎಲ್ಲಾ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ, ಯಾವುದೇ ತಪ್ಪುಗಳಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು.

ಕೊನೆ ಹಂತದಲ್ಲಿ ಅರ್ಜಿಯನ್ನು ಸಲ್ಲಿಸಿ, ಭವಿಷ್ಯದ ಬಳಕೆಗಾಗಿ  ಅರ್ಜಿ ಸಂಖ್ಯೆ ಅಥವಾ ನೊಂದಣಿ ಸಂಖ್ಯೆಯನ್ನು ಸುರಕ್ಷಿತವಾಗಿ ಉಳಿಸಿಕೊಳ್ಳಬೇಕು.

ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು 

ಅರ್ಜಿ ಪ್ರಕ್ರಿಯೆ ಮೇಲೆ ಕೆಲವು ಪ್ರಮುಖ ದಾಖಲೆಗಳನ್ನು ಸಲ್ಲಿಸುವುದು ಕಟ್ಟೆಯವಾಗಿದೆ.

ಅವುಗಳೆಂದರೆ ಆಧಾರ್ ಕಾರ್ಡ್, ಶೈಕ್ಷಣಿಕ ದಾಖಲೆಗಳಾದ SSLC ಅಂಕಪಟ್ಟಿ, PUC ಅಂಕಪಟ್ಟಿ, ಪದವಿ ಅಂಕಪಟ್ಟಿ, ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಅನುಭವ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಾಸ್ಪೋರ್ಟ್ ಗಾತ್ರದ ಫೋಟೋ, ಸಹಿ  ಇವುಗಳು ಇರಬೇಕು.

ಅರ್ಜಿ ಸಲ್ಲಿಸುವ ಮೊದಲು ಗಮನಿಸಬೇಕಾದ ಅಂಶಗಳು 

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ತಮ್ಮ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿಕೊಳ್ಳಬೇಕು. ಅರ್ಜಿಯಲ್ಲಿ ಇರುವ ಮಾಹಿತಿ ನಿಖರವಾಗಿರಬೇಕು.

ಕೊನೆ ದಿನಾಂಕದವರೆಗೆ ಕಾಯದೆ ಮುಂಚಿತವಾಗಿ ಅರ್ಜಿ ಸಲ್ಲಿಸುವುದು ಉತ್ತಮ. ತಾಂತ್ರಿಕ ಸಮಸ್ಯೆಗಳು ಅಥವಾ ವೆಬ್ಸೈಟ್ನಲ್ಲಿ ಹೆಚ್ಚಿನ ಟ್ರಾಫಿಕ್ ಇರುವ ಕಾರಣ ಕೊನೆಯ ಕ್ಷಣದಲ್ಲಿ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇರುತ್ತದೆ.

ಕೊನೆಯ ಮಾತು

ವಿಜ್ಞಾನ, ತಂತ್ರಜ್ಞಾನ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ವೃತ್ತಿ ನಿರ್ಮಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ RRI Recruitment 2026 ಅತ್ಯುತ್ತಮ ಅವಕಾಶವಾಗಿದೆ. ಭಾರತದ ಹೆಸರಾಂತ ಸಂಶೋಧನಾ ಸಂಸ್ಥೆಯಲ್ಲಿ ಕೆಲಸ ಮಾಡುವ ಅವಕಾಶ ಜೊತೆಗೆ ಉತ್ತಮ ವೇತನ ಮತ್ತು ಅಮೂಲ್ಯ ಅನುಭವವನ್ನು ಈ ನೇಮಕಾತಿ ಒದಗಿಸುತ್ತದೆ.

ಪದವಿದಾರರು, ಸ್ನಾತಕೋತ್ತರ ಪದವೀಧರರು, ಹಾಗೂ ಸಂಶೋಧನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಯುವಕರು ಈ ಅವಕಾಶವನ್ನು ತಪ್ಪಿಸಿಕೊಳ್ಳಬಾರದು. ಅರ್ಹ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ ಕೊನೆಯ ದಿನಾಂಕ ದೊಳಗೆ ಅರ್ಜಿ ಸಲ್ಲಿಸುವುದು ಉತ್ತಮ.

ಭವಿಷ್ಯದಲ್ಲಿ ವಿಜ್ಞಾನಿ ಸಂಶೋಧಕ ಅಥವಾ ತಾಂತ್ರಿಕ ತಜ್ಞರಾಗುವ ಕನಸು ಹೊಂದಿರುವ ಅಭ್ಯರ್ಥಿಗಳಿಗೆ RRIಯ  ಈ ನೇಮಕಾತಿ ಯಶಸ್ಸಿನ ಹೊಸ ದಾರಿಯನ್ನು ತೆರೆಯಬಹುದು.

Leave a Comment